ಕಲ್ಬುರ್ಗಿ ಪೀಠದ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾಗಿ ವೆಂಕಟ ಸಿಂಗ್ ಅಧಿಕಾರ ಸ್ವೀಕಾರ.. ಅಂತರ್: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಕಲಬುರಗಿ ಪೀಠದ ನೂತನ ಆಯುಕ್ತರಾಗಿ ನೇಮಕಗೊಂಡಿರುವಂತಹ ಬಿ.ವೆಂಕಟಸಿಂಗ್ ಅವರು ಇಂದು ಬೆಳಗ್ಗೆ ಅಧಿಕಾರ ಸ್ವಿಕರಿಸಿದರು. ಕಲಬುರಗಿ ನಗರದ ರೈಲು ನಿಲ್ದಾಣ ಹತ್ತಿರದ ಮಹಲ್-ಎ-ಶಾಹಿ ಅತಿಥಿಗೃಹ ಆವರಣದಲ್ಲಿರುವ ಆಯೋಗದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿ ವೆಂಕಟಸಿಂಗ್ ಅವರು ಈ ಪೀಠದಲ್ಲಿ 7 ಸಾವಿರ ಅರ್ಜಿಗಳು ವಿಲೇವಾರಿ ಬಾಕಿ ಇವೆ ಈ ಎಲ್ಲಾ ಅರ್ಜಿಗಳನ್ನು ನಮ್ಮ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲಿಸಿ ತ್ವರಿತಗತಿ ವಿಲೇವಾರಿಗೆ ಬೇಕಾದಂತ ಕ್ರಮಗಳನ್ನು ಕೈಗೊಳ್ಳುತ್ತೇನೆ ಅಂತ ತಿಳಿಸಿದರು
ಕಲ್ಬುರ್ಗಿ ಪೀಠದ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾಗಿ ವೆಂಕಟ ಸಿಂಗ್ ಅಧಿಕಾರ ಸ್ವೀಕಾರ
ಕಲ್ಬುರ್ಗಿ ಪೀಠದ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾಗಿ ವೆಂಕಟ ಸಿಂಗ್ ಅಧಿಕಾರ ಸ್ವೀಕಾರ





