ಮದ್ಯ ಮಾರಾಟ ನಿಷೇಧ ಆದೇಶ ಉಲ್ಲಂಘಿಸಿ ಮದ್ಯ ಮಾರಾಟ ಮಾಡುತ್ತಿದ್ದ ಮದ್ಯದ ಅಂಗಡಿ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 13 ಲಕ್ಷ ರೂಪಾಯಿ ಬೆಲೆ ಬಾಳುವ ಮದ್ಯ ಜಪ್ತಿ ಮಾಡಿದ್ದಾರೆ.ಯಾದಗಿರಿ ನಗರದ ಗೌತಮ ಮದ್ಯದಂಗಡಿ ಮೇಲೆ ಅಬಕಾರಿ ಉಪ ಆಯುಕ್ತೆ ಶಾರದಾ ಕೋಲಕಾರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಅಧೀಕ್ಷಕ ಆನಂದ ಉಕ್ಕಲಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಸುಮಾರು 3190 ಲೀಟರ್ ಮದ್ಯ ಜಪ್ತಿ ಮಾಡಿದ್ದು,ಆರೋಪಿ ಹಣಮಂತ ಅವರನ್ನು ಬಂಧಿಸಲಾಗಿದೆ. ಈ ಬಗ್ಗೆ ಸನ್ನದುದಾರರ ವಿರುದ್ಧ ಕೇಸ್ ದಾಖಲಿಸಲಾಗಿದೆ.