Home Uncategorized ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಅಂದೋಲನವನ್ನು ಯಶಸ್ವಿಗೊಳಿಸಲು ಸೂಚನೆ; . ಫೌಜಿಯಾ ತರನ್ನುಮ್

ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಅಂದೋಲನವನ್ನು ಯಶಸ್ವಿಗೊಳಿಸಲು ಸೂಚನೆ; . ಫೌಜಿಯಾ ತರನ್ನುಮ್

0
ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಅಂದೋಲನವನ್ನು ಯಶಸ್ವಿಗೊಳಿಸಲು ಸೂಚನೆ; . ಫೌಜಿಯಾ ತರನ್ನುಮ್

ಜಿಲ್ಲೆಯಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಅಂದೋಲನವನ್ನು ಯಶಸ್ವಿಗೊಳಿಸಲು ಸೂಚನೆ; . ಫೌಜಿಯಾ ತರನ್ನುಮ್ ಕಲಬುರಗಿ,ನ.14.(ಕರ್ನಾಟಕ ವಾರ್ತೆ)-ಕಲಬುರಗಿ ಜಿಲ್ಲೆಯಲ್ಲಿ ಇದೇ ನವೆಂಬರ್ 15 ರಿಂದ 30 ವರೆಗೆ ಹಮ್ಮಿಕೊಳ್ಳಲಾದ ಸಕ್ರಿಯ ಕ್ಷಯರೋಗ ಪತ್ತೆ ಅಂದೋಲನವನ್ನು ಯಶಸ್ವಿಗೊಳಿಸಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅವರು ಗುರುವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಆರೋಗ್ಯ ಅಭಿಯಾನದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ ಅವರು ಮಾತನಾಡಿ, 2025ರ ಆಗಸ್ಟ್ದಿಂದ ಅಕ್ಟೋಬರ್ವರೆಗೆ ಜಿಲ್ಲೆಯಲ್ಲಿ ಒಟ್ಟು 11 ತಾಯಿ ಮರಣದ ಪ್ರಕರಣವು ದಾಖಲಾಗಿವೆ ಎಂದು ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ತಾಯಿ ಮರಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬೇಕು. ಇನ್ನು ಮುಂದೆ ಜಿಲ್ಲೆಯಲ್ಲಿ ತಾಯಿ ಮರಣದ ಪ್ರಕರಣವು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ವೈದ್ಯರು ಕೈಗೊಳ್ಳುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ನವೆಂಬರ್ 24 ರಿಂದ ಡಿಸೆಂಬರ್ 9 ರವರೆಗೆ ನಡೆಯುವ ಕುಷ್ಠರೋಗ ಪತ್ತೆ ಹಚ್ಚುವ ಅಂದೋಲನ ಕಾರ್ಯಕ್ರಮದ ಹಾಗೂ ತಂಬಾಕು ಮುಕ್ತ ಯುವ ಅಭಿಯಾನ 3.0 ಕಾರ್ಯಕ್ರಮದ ಭಿತ್ತಿ ಪತ್ರವನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು. ಕಾಯಕಲ್ಪ ಕಾರ್ಯಕ್ರಮದಡಿ ಆಯ್ಕೆಯಾದ ಕಲಬುರಗಿ ಜಿಲ್ಲೆಯ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪ್ರಶಸ್ತಿ ಪತ್ರ ವಿತರಣೆ ಮಾಡಿ ಸನ್ಮಾನಿಸಲಾಯಿತು. ಸಭೆಯಲ್ಲಿ ಆರ್.ಸಿ.ಹೆಚ್.ಓ. ಡಾ. ಸಿದ್ರಾಮಪ್ಪ ಪಾಟೀಲ, ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಿವಶರಣಪ್ಪ ಭೂಸನೂರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಚಂದ್ರಕಾಂತ ನರಬೋಳಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ವಿವೇಕಾನಂದ ರೆಡ್ಡಿ ಸೇರಿದಂತೆ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಜಿಮ್ಸ್ ಆಸ್ಪತ್ರೆಯ ಮುಖ್ಯಸ್ಥರು, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು, ಜಿಲ್ಲಾ ತರಬೇತಿ ಕಾರ್ಯಕ್ರಮದ ಪ್ರಾಂಶುಪಾಲರು, ತಾಲೂಕಾ ಆರೋಗ್ಯ ಅಧಿಕಾರಿಗಳು, ಆರೋಗ್ಯ ಸಂಸ್ಥೆಯ ಆಡಳಿತ ವೈದ್ಯಾಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

error: Content is protected !!