ನಟ ಧರ್ಮೇಂದ್ರ ನಿಧನ; ಜನ್ಮದಿನಕ್ಕೂ ಮೊದಲು ಕೊನೆಯುಸಿರು ಬಾಲಿವುಡ್ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತರಾಗಿದ್ದಾರೆ. ಧರ್ಮೇಂದ್ರ ಅವರಿಗೆ 89 ವರ್ಷ ವಯಸ್ಸಾಗಿತ್ತು. ಅವರ ಅಗಲಿಕೆಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದ ನಟ ಧರ್ಮೇಂದ್ರ ಅವರು ಇನ್ನಿಲ್ಲ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ 89 ವರ್ಷ ವಯಸ್ಸಿನ ಧರ್ಮೇಂದ್ರ ಅವರಿಗೆ ಈ ತಿಂಗಳ ಆರಂಭದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ತರಲಾಯಿತು. ಆದರೆ, ಇಂದು ಅವರು ನಿಧನರಾಗಿದ್ದಾರೆ. ಡಿಸೆಂಬರ್ 8ರಂದು ಜನ್ಮದಿನ ಆಚರಿಸಿಕೊಳ್ಳಬೇಕಿತ್ತುಇತ್ತೀಚೆಗಷ್ಟೇ ಧರ್ಮೇಂದ್ರ ಅವರು ಆಸ್ಪತ್ರೆಗೆ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದರು. ಆ ಬಳಿಕ ಕೆಲವೇ ದಿನಗಳಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಸೋಮವಾರ (ನವೆಂಬರ್ 10) ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದು ತಿಳಿದು ಅಭಿಮಾನಿಗಳಿಗೆ ಆತಂಕ ಆಗಿತ್ತು. ನಂತರ ಅವರನ್ನು ಕುಟುಂಬದವರು ಮನೆಗೆ ಕರೆತಂದಿದ್ದರು. ಭಾರತೀಯ ಚಿತ್ರರಂಗಕ್ಕೆ ಧರ್ಮೇಂದ್ರ ಅವರು ನೀಡಿದ ಕೊಡುಗೆ ಅಪಾರ. ನಟನಾಗಿ, ನಿರ್ಮಾಪಕನಾಗಿ ಚಿತ್ರರಂಗದಲ್ಲಿ ಅವರು 6 ದಶಕಗಳ ಕಾಲ ಸಕ್ರಿಯರಾಗಿದ್ದರು. ಇಳಿ ವಯಸ್ಸಿನಲ್ಲಿ ಕೂಡ ಅವರು ನಟಿಸುವುದು ನಿಲ್ಲಿಸಿರಲಿಲ್ಲ. ಇತ್ತೀಚಿನ ವರ್ಷಗಳಲ್ಲಿ ಸಹ ಅವರು ಚಿಕ್ಕ-ಪುಟ್ಟ ಪಾತ್ರಗಳನ್ನು ಮಾಡುತ್ತಿದ್ದರು. ಅವರ ನಿಧನದಿಂದ ಕೋಟ್ಯಂತರ ಅಭಿಮಾನಿಗಳಿಗೆ ನೋವಾಗಿದೆ
ನಟ ಧರ್ಮೇಂದ್ರ ನಿಧನ; ಜನ್ಮದಿನಕ್ಕೂ ಮೊದಲು ಕೊನೆಯುಸಿರು
ನಟ ಧರ್ಮೇಂದ್ರ ನಿಧನ; ಜನ್ಮದಿನಕ್ಕೂ ಮೊದಲು ಕೊನೆಯುಸಿರು





