Google search engine
ಮನೆUncategorizedಅಲ್ಪಸಂಖ್ಯಾತ ವಿರೋಧಿ ಮತ್ತು ಜನವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಮತ್ತು 4% ಮುಸ್ಲಿಂ ಮೀಸಲಾತಿಸ್ಥಾಪಿಸಲು ಒತ್ತಾಯ

ಅಲ್ಪಸಂಖ್ಯಾತ ವಿರೋಧಿ ಮತ್ತು ಜನವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಮತ್ತು 4% ಮುಸ್ಲಿಂ ಮೀಸಲಾತಿಸ್ಥಾಪಿಸಲು ಒತ್ತಾಯ

ಅಲ್ಪಸಂಖ್ಯಾತ ವಿರೋಧಿ ಮತ್ತು ಜನವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಮತ್ತು 4% ಮುಸ್ಲಿಂ ಮೀಸಲಾತಿಸ್ಥಾಪಿಸಲು ಒತ್ತಾಯ

ಅಲ್ಪಸಂಖ್ಯಾತ ವಿರೋಧಿ ಮತ್ತು ಜನವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಮತ್ತು 4% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಲು ಒತ್ತಾಯ ಕರ್ನಾಟಕದ ಪ್ರಸ್ತುತ ಸರಕಾರಕ್ಕೆ ಈ ಕೆಳಕಂಡ ಗಂಭೀರ ವಿಷಯಗಳ ಬಗ್ಗೆ ತಕ್ಷಣದ ಗಮನಹರಿಸಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ ಕಳೆದ ಬಿಜೆಪಿ ಸರಕಾರವು ಜಾರಿಗೆ ತಂದ ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ, 2021 ಮತ್ತು ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ, 2021 ಅತಿ ವಿವಾದಿತ, ಕೋಮು ಪ್ರಚೋದಿತ ಮತ್ತು ಸಂವಿಧಾನ ವಿರೋಧಿ ಕಾನೂನುಗಳಾಗಿವೆ ಈ ಕಾಯ್ದೆಯ ಅನುಷ್ಠಾನದಿಂದಾಗಿ ರಾಜ್ಯದಲ್ಲಿ ಭಯದ ವಾತಾವರಣ ಉಂಟಾಗಿದೆ. ಗೋ ಸಾಗಾಣಿಕದಾರರ ಮೇಲೆ ಪೊಲೀಸರಿಂದ ಶೂಟೌಟ್, ಮನೆ-ಮುಗ್ಗಟ್ಟುಗಳ ಜಪ್ತಿ ಮುಂತಾದ ಕಳವಳಕಾರಿ ಘಟನೆಗಳು ನಡೆದಿರುವುದು ಆತಂಕಕಾರಿಯಾಗಿದೆ. ಈ ಕರಾಳ ಕಾನೂನಿನಿಂದಾಗಿ ರೈತರು ತಾವು ಬೆಳೆಸಿದ ಜಾನುವಾರುಗಳನ್ನು ಮಾರಾಟ ಮಾಡಲು ಸಾಧ್ಯವಾಗದೆ, ತಮ್ಮ ನೆಚ್ಚಿನ ಕೃಷಿಯಾದ ಜಾನುವಾರು ಸಾಕಾಣಿಕೆಯನ್ನು ಮುಂದುವರೆಸಲಾಗದೆ ಕಂಗಾಲಾಗಿದ್ದಾರೆ. ಇದು ರೈತ ಸಮುದಾಯಕ್ಕೆ ಅನ್ಯಾಯವನ್ನುಂಟು ಮಾಡಿದೆ. ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ, 2021 (ಮತಾಂತರ ನಿಷೇಧ ಕಾಯ್ದೆ): ಈ ಕಾಯ್ದೆಯ ನೆಪವನ್ನು ಇಟ್ಟುಕೊಂಡು ಕೋಮುವಾದಿಗಳು ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯ ಎಸಗುತ್ತಿದ್ದಾರೆ. ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಯಾವುದೇ ಒತ್ತಡವಿಲ್ಲದೆ, ತಮಗೆ ಬೇಕಾದ ಧರ್ಮವನ್ನು ಒಪ್ಪಿ, ಆ ಪ್ರಕಾರ ನಡೆದುಕೊಂಡು ಹೋಗಲು ಅವಕಾಶ ಕಲ್ಪಿಸಿದೆ. ಆದರೆ ಈ ಕಾನೂನು ಚಾಲ್ತಿಯಲ್ಲಿರುವುದು ಸಂವಿಧಾನ ವಿರೋಧಿಯಾಗಿದೆ ಮತ್ತು ಇದು ಸಂಘ ಪರಿವಾರದ ಕೋಮು ಅಜೆಂಡಾದ ಭಾಗವಾಗಿದೆ. ಚುನಾವಣೆ ಪ್ರಣಾಳಿಕೆಯ ಆಶ್ವಾಸನೆ: 2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಒಂದು ವರ್ಷದ ಒಳಗೆ ಇಂತಹ ಕರಾಳ ಮತ್ತು ಜನವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯುವ ಬಗ್ಗೆ ಸ್ಪಷ್ಟವಾದ ಆಶ್ವಾಸನೆಯನ್ನು ನೀಡಿತ್ತು. ಆದ್ದರಿಂದ, ಪ್ರಸ್ತುತ ಸರಕಾರವು ತನ್ನ ಭರವಸೆಯನ್ನು ಈಡೇರಿಸುವ ತುರ್ತು ಅವಶ್ಯಕತೆಯಿದೆ. 4% ಮುಸ್ಲಿಂ ಮೀಸಲಾತಿ ಮರುಸ್ಥಾಪನೆ: ಕಳೆದ ಸರಕಾರವು ರದ್ದುಪಡಿಸಿದ 4% ಮುಸ್ಲಿಂ ಮೀಸಲಾತಿಯನ್ನು ತಕ್ಷಣವೇ ಮರುಸ್ಥಾಪಿಸಬೇಕು. ಇದು ಮುಸ್ಲಿಂ ಸಮುದಾಯದ ಸಾಮಾಜಿಕ ನ್ಯಾಯ ಮತ್ತು ಶಿಕ್ಷಣ, ಉದ್ಯೋಗದಲ್ಲಿ ಸಮಾನ ಅವಕಾಶವನ್ನು ಖಾತರಿಪಡಿಸಲು ಅತ್ಯವಶ್ಯಕವಾಗಿದೆ. ಆದ್ದರಿಂದ, ಸನ್ಮಾನ್ಯ ಮುಖ್ಯಮಂತ್ರಿಗಳಲ್ಲಿ ಈ ಕೆಳಕಂಡ ನಿರ್ಣಯಗಳನ್ನು ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಕೈಗೊಳ್ಳುವಂತೆ ವಿನಂತಿಸಿಕೊಳ್ಳುತ್ತೇವೆ: •ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ, 2021 ಅನ್ನು ತಕ್ಷಣವೇ ರದ್ದುಪಡಿಸಬೇಕು •ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ, 2021 ಅನ್ನು ರದ್ದುಪಡಿಸಬೇಕು •ರದ್ದುಪಡಿಸಲಾದ 4% ಮುಸ್ಲಿಂ ಮೀಸಲಾತಿಯನ್ನು ತಕ್ಷಣವೇ ಮರುಸ್ಥಾಪಿಸಬೇಕು ತಾವು ಕೂಡಲೇ ಈ ಬೇಡಿಕೆಗಳನ್ನು ಈಡೇರಿಸಿ, ರಾಜ್ಯದಲ್ಲಿ ರೈತರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ನಂಬಿಕೆ ಇಟ್ಟಿರುವ ಎಲ್ಲ ನಾಗರಿಕರಿಗೆ ನ್ಯಾಯ ಒದಗಿಸಬೇಕೆಂದು ಕೋರುತ್ತೇವೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!