Google search engine
ಮನೆUncategorizedಸಾರ್ವಜನಿಕರ ಕೆಲಸದಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಬೇಡಿ: ರಾಮಲಿಂಗಾರೆಡ್ಡಿ

ಸಾರ್ವಜನಿಕರ ಕೆಲಸದಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಬೇಡಿ: ರಾಮಲಿಂಗಾರೆಡ್ಡಿ

ಸಾರ್ವಜನಿಕರ ಕೆಲಸದಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಬೇಡಿ: ರಾಮಲಿಂಗಾರೆಡ್ಡಿ

ಸಾರ್ವಜನಿಕರ ಕೆಲಸದಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಬೇಡಿ: ರಾಮಲಿಂಗಾರೆಡ್ಡಿ ಮೈಸೂರು,ನ.29(ಕರ್ನಾಟಕವಾರ್ತೆ):- ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳಿಗೆ ಮದ್ಯವರ್ತಿಗಳು ಹಾಗೂ ವಾಹನ ಚಾಲನಾ ತರಬೇತಿ ಶಾಲೆಯವರು ಬರುವ ಚಾಳಿಯಿದ್ದು, ಇದಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಎಚ್ಚರಿಕೆ ವಹಿಸಿ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದರು ಅವರು ಇಂದು ಮೈಸೂರು ದಕ್ಷಿಣ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಪ್ರಾದೇಶಿಕ ಸಾರಿಗೆ ಇಲಾಖೆಯ 31 ಸೇವೆಗಳನ್ನು ಸಕಾಲದಲ್ಲಿ ಆನ್ ಲೈನ್ ಮೂಲಕ ನೀಡಲಾಗುತ್ತಿದೆ. ಸಾರ್ವಜನಿಕರು ಅನಿವಾರ್ಯವಾಗಿ ಕಚೇರಿಗೆ ಅಲೆದಾಡುವುದು ಬೇಕಿಲ್ಲ, ಸಕಾಲ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು ಡಿಸೆಂಬರ್ 1 ರಿಂದ ಒನ್ ನೇಷನ್ ಒನ್ ಕಾಡ್೯ ಡಿಸೆಂಬರ್ 1 ರಿಂದ ಮೈಸೂರಿನಲ್ಲಿ ಒನ್ ನೇಷನ್ ಒನ್ ಕಾಡ್೯ ಯೋಜನೆಗೆ ಚಾಲನೆ ನೀಡಲಾಗುವುದು. ಆರ್.ಸಿ ಕಾಡ್೯, ಹಾಗೂ ಡಿ.ಎಲ್ ನಲ್ಲಿ QR ಕೋಡ್ ಯಿದ್ದು, ಇದರಲ್ಲಿ ವಿವರವಾದ ಮಾಹಿತಿ ಇರುತ್ತದೆ ಎಂದರು. ಮೈಸೂರು ವಿಭಾಗದ ವ್ಯಾಪ್ತಿಯ ಪ್ರಾದೇಶಿಕ ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ 2025 ಏಪ್ರಿಲ್ ನಿಂದ ಅಕ್ಟೋಬರ್ ವರೆಗೆ 648 ಕೋಟಿ ರೂ ರಜಸ್ವ ಸಂಗ್ತಹಿಸಲಾಗಿರುತ್ತದೆ. ತಪಾಸಣೆ ವೇಳೆ 15.17 ಕೋಟಿ ರೂ ದಂಡ ವಸೂಲಿ ಮಾಡಲಾಗಿರುತ್ತದೆ ಎಂದರು ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಬಸ್ ನಿಲ್ದಾಣಗಳಲ್ಲಿ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಬಸ್ ನಿಲ್ದಾಣಗಳ ಶೌಚಾಲಯಗಳಿಗೆ ಭೇಟಿ ನೀಡಿ ತಪಾಸಣೆ ನಡಸಬೇಕು ಎಂದರು. 100 ವಿದ್ಯುತ್ ಚಾಲಿತ ಬಸ್ ಕೆ.ಎಸ್.ಆರ್.ಟಿ.ಸಿ ವತಿಯಿಂದ ಮೈಸೂರು ಜಿಲ್ಲೆಗೆ 100 ವಿದ್ಯುತ್ ಚಾಲಿತ ಬಸ್ ಗೆ ಪ್ರಸ್ತಾವನೆ ಸಲ್ಲಿಸಿದ್ದು, ಇದರ ನಿರ್ವಹಣೆಗಗಿ ಬನ್ನಿಮಂಟಪದಲ್ಲಿ ಡಿಪೋ ನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ತಗಡೂರಿನಲ್ಲಿ ಬಸ್ ನಿಲ್ದಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಮೈಸೂರು ನಗರ ಬೆಳೆಯುತ್ತಿದ್ದು, ಹೊರ ವಲಯದ ರಿಂಗ್ ರೋಡ್ ಗಳಲ್ಲಿ ಬಸ್ ಹಾಗೂ ಟ್ರಿಪ್ ಗಳ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 4 ಹೊಸ ಬಸ್ ನಿಲ್ದಾಣಕ್ಕೆ ಸ್ಥಳ ಗುರುತಿಸಲು ಯೋಜಿಸಲಾಗುತ್ತಿದೆ ಎಂದರು. 120 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೈಸೂರು ಹೊಸ ಗ್ರಾಮಾಂತರ ಬಸ್ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿರುತ್ತದೆ ಎಂದರು. ಸಭೆಯಲ್ಲಿ ಅಪರ ಸಾರಿಗೆ ಆಯುಕ್ತೆ ಓಂಕಾರೇಶ್ವರಿ ಅವರು ಮೈಸೂರು ವಿಭಾಗದ ಪ್ರಗತಿಯ ಬಗ್ಗೆ ಸಚಿವರಿಗೆ ವಿವರಿಸಿದರು. ಸಭೆಯಲ್ಲಿ ಜಂಟಿ ಸಾರಿಗೆ ಅಯುಕ್ತ ಹಾಗೂ ಮೈಸೂರು ದಕ್ಷಿಣ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ್ ಚೌಹಣ್, ಮೈಸೂರು ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ, ಉಪ ಪ್ರಾದೇಶಿಕ ಸಾರಿಗೆ ಅಧಿಕಾರಿ ರಾಮಚಂದ್ರ, ಮೈಸೂರು ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಶ್ರೀನಿವಾಸ್, ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!