Google search engine
ಮನೆUncategorizedಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ೬೯ನೇ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಜಿಲ್ಲಾಡಳಿತದಿಂದ ಆಚರಣೆ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ೬೯ನೇ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಜಿಲ್ಲಾಡಳಿತದಿಂದ ಆಚರಣೆ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ೬೯ನೇ ಮಹಾಪರಿನಿರ್ವಾಣ ದಿನಾಚರಣೆಯಲ್ಲಿ ಜಿಲ್ಲಾಡಳಿತದಿಂದ ಆಚರಣೆ ಕಲಬುರಗಿ: ಡಿಸೆಂಬರ್ 06 (ಕರ್ನಾಟಕ ವಾರ್ತೆ) ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ ಡಾ. ಬಿ.ಆರ್. ಅಂಬೇಡ್ಕರ್ ರವರ ೬೯ನೇ ಮಹಾಪರಿನಿರ್ವಾಣ ದಿನವನ್ನು ನಗರದ ಜಗತ್ ವೃತ್ತದಲ್ಲಿ ಭಾವಪೂರ್ಣವಾಗಿ ಆಚರಿಸಲಾಯಿತು. ಬೆಳಿಗ್ಗೆ 8.30ಕ್ಕೆ ಡಾ. ಅಂಬೇಡ್ಕರ್ ರವರ ಪ್ರತಿಮೆಗೆ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಪೋಲಿಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಭಂವರ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡಮನಿ, ಪೂಜ್ಯ ಭಂತಹ ವರಜ್ಯೋತೇ ಅಣದೂರ ಬೀದರ್, ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಮಹೇಶ್ ಹುಬಳ್ಳಿ ಸೇರಿದಂತೆ ಹಲವಾರು ಗಣ್ಯರು ಮಾಲಾರ್ಪಣೆ ಮತ್ತು ಗೌರವ ಸರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಪ್ರಕಾಶ ಹದಿನೂರು, ವಿಠ್ಠಲ್ ಎಸ್. ಗೋಳ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಅವರು, ತ್ರಿವರ್ಣ ಧ್ವಜವನ್ನು ಮತ್ತು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಹಾಗೂ ನಗರ ಪೋಲಿಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ನೀಲಿ ಧ್ವಜಾರೋಹಣ ನೆರವೇರಿಸಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!