ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69 ನೇ ಮಹಾ ಪರಿ ನಿರ್ವಾಣ ದಿನ – ಪುಷ್ಪಾರ್ಚನೆ ಮೂಲಕ ಜಿಲ್ಲಾಡಳಿತದಿಂದ ನಮನ ಅಂಬೇಡ್ಕರ್ ಅವರ ಆದರ್ಶ ಮತ್ತು ವ್ಯಕ್ತಿತ್ವ ನಮಗೆಲ್ಲ ಪ್ರೇರಣೆ ಮೈಸೂರು,ಡಿ.06(ಕರ್ನಾಟಕವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ರಾಷ್ಟ್ರನಾಯಕರಾದ ಡಾ. ಬಿ. ಆರ್. ಅಂಬೇಡ್ಕರ್ ಅವರ 69 ನೇ ಮಹಾ ಪರಿನಿರ್ವಾಣ ಕಾರ್ಯಕ್ರಮದ ಪ್ರಯುಕ್ತ ಇಂದು ಟೌನ್ ಹಾಲ್ ಆವರಣದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ನರಸಿಂಹ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀವತ್ಸ, ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ, ವಿಧಾನ ಪರಿಷತ್ ನ ಶಾಸಕರಾದ ಮಂಜೇಗೌಡ , ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ಅವರು ನಮನ ಸಲ್ಲಿಸಿದರು. ನರಸಿಂಹ ರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ಮಾತನಾಡಿ ಭಾರತದ ಎಲ್ಲಾ ವರ್ಗದ ಜನರಿಗೆ ಸಮಾನತೆಯನ್ನು ಸಾರುವ ಸಂವಿಧಾನವನ್ನು ಕೊಟ್ಟಿರುವವವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಅವರು ಇಂದು ಭೌತಿಕವಾಗಿ ನಮ್ಮ ಜೊತೆ ಇಲ್ಲದೆ ಇರಬಹುದು ಆದರೆ ಅವರು ನಡೆದುಬಂದ ಹಾದಿ, ಅವರ ಆದರ್ಶ ಹಾಗೂ ವ್ಯಕ್ತಿತ್ವ ನಮಗೆಲ್ಲರಿಗೂ ಇಂದಿಗೂ ಪ್ರೇರಣೆಯಾಗಿದೆ ಎಂದು ಹೇಳಿದರು. ಅಂಬೇಡ್ಕರ್ ಅವರು ಕಟ್ಟ ಕಡೆಯ ಭಾರತೀಯನಿಗೂ ಸಿಗದೆ ಇರುವ ಸಮಾನತೆ ಎಂಬ ಶಕ್ತಿಯನ್ನು ಸಂವಿಧಾನದ ಮೂಲಕ ನೀಡಿದ್ದಾರೆ. ಸಂವಿಧಾನ ಆಶಯಗಳನ್ನು ಯಥಾವತ್ತಾಗಿ ಜಾರಿ ಮಾಡುವುದಕ್ಕೆ ಕರ್ನಾಟಕ ಸರ್ಕಾರ ಪ್ರತಿ ಶಾಲಾ ಕಾಲೇಜುಗಳಲ್ಲಿ , ಸಭೆ ಸಮಾರಂಭಗಳಲ್ಲಿ ಕಾರ್ಯಕ್ರಮಗಳಲ್ಲಿ ಬೋಧನೆ ಮಾಡಲಾಗುತ್ತಿದೆ. ಮೈಸೂರಿನಲ್ಲಿ ಅಂಬೇಡ್ಕರ್ ಭವನ ಆದಷ್ಟು ಬೇಗ ಲೋಕಾರ್ಪಣೆ ಯಾಗಲಿ ಎಂದು ಆಶಿಸಿದರು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡ ಅವರು ಮಾತನಾಡಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣದ ದಿನವನ್ನು ಇಂದು ಭಾರತ ದೇಶದಾದ್ಯಂತ ಆಚರಣೆ ಮಾಡಲಾಗುತ್ತಿದ್ದು, ಅವರು ನೀಡಿರುವ ಸಂವಿಧಾನವನ್ನು ಭಾರತದ 140 ಕೋಟಿ ಜನರು ಅಳವಡಿಸಿಕೊಂಡು ಬದುಕುತ್ತಿದ್ದೇವೆ ಅವರ ತತ್ವಗಳೇ ನಮಗೆ ಆದರ್ಶ ಎಂದು ಹೇಳಿದರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ. ಎಸ್ ಶ್ರೀವತ್ಸ ಅವರು ಮಾತನಾಡಿ ಅಂಬೇಡ್ಕರ್ ಅವರು ಬಿಟ್ಟು ಹೋದ ದಿನವನ್ನು ಪರಿನಿರ್ವಾಣ ದಿನ ಎಂದು ಗೌರವ ಸಮರ್ಪಣೆ ಮಾಡಲಾಗುತ್ತಿದ್ದು, ಅವರು ದಲಿತರಿಗೆ ಹಾಗೂ ಮಹಿಳೆಯರಿಗೆ ಸಮಾಜದಲ್ಲಿ ಸಮಾನ ಅವಕಾಶವನ್ನು ಕೊಟ್ಟಂತಹ ಮೇರು ವ್ಯಕ್ತಿತ್ವ ಅಂಬೇಡ್ಕರ್ ಅವರದ್ದು. ಅವರು ನಡೆದು ಬಂದ ಹಾದಿ ನಮಗೆಲ್ಲರಿಗೂ ಸ್ಪೂರ್ತಿದಾಯಕವಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಲ್ಯಾಣ ಶ್ರೀ ಬಂತೇಜಿ ಅವರು ಮಾತನಾಡಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು, ತತ್ವಗಳು ಅವರು ನಡೆದು ಬಂದಂತಹ ಹಾದಿ ಎಲ್ಲರಿಗೂ ಸಹ ಅಮೂಲ್ಯವಾದದ್ದು, ಹಾಗೂ ಮಾರ್ಗದರ್ಶಕವಾಗಿದೆ. ಆಧುನಿಕ ಯುಗದಲ್ಲಿ ನಮಗೆ ಸಿಕ್ಕಂತಹ ಭಾಗ್ಯವಿದಾತರು ಹಾಗೂ ಜ್ಯಾತ್ಯಾತೀತವಾಗಿ ಧರ್ಮತೀತವಾಗಿ ಎಲ್ಲಾ ಜನಾಂಗವು ಒಪ್ಪಿಕೊಳ್ಳಬಹುದಾದಂತಹ ರತ್ನ ಎಂದರೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಹೇಳಿದರು
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69 ನೇ ಮಹಾ ಪರಿ ನಿರ್ವಾಣ ದಿನ – ಪುಷ್ಪಾರ್ಚನೆ ಮೂಲಕ ಜಿಲ್ಲಾಡಳಿತದಿಂದ ನಮನ
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69 ನೇ ಮಹಾ ಪರಿ ನಿರ್ವಾಣ ದಿನ - ಪುಷ್ಪಾರ್ಚನೆ ಮೂಲಕ ಜಿಲ್ಲಾಡಳಿತದಿಂದ ನಮನ





