Google search engine
ಮನೆUncategorizedನಿಗಮಗಳ ಕಾರ್ಮಿಕ ಸಂಘಟನೆಗಳ ಜೊತೆ ನಿನ್ನೆ ನಡೆದ ಸಭೆ

ನಿಗಮಗಳ ಕಾರ್ಮಿಕ ಸಂಘಟನೆಗಳ ಜೊತೆ ನಿನ್ನೆ ನಡೆದ ಸಭೆ

ನಿಗಮಗಳ ಕಾರ್ಮಿಕ ಸಂಘಟನೆಗಳ ಜೊತೆ ನಿನ್ನೆ ನಡೆದ ಸಭೆ

ನಿಗಮಗಳ ಕಾರ್ಮಿಕ ಸಂಘಟನೆಗಳ ಜೊತೆ ನಿನ್ನೆ ನಡೆದ ಸಭೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೇಂದ್ರ ಕಚೇರಿ, ಬೆಂಗಳೂರಿನಲ್ಲಿ ನಿನ್ನೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ Ramalinga Reddy ಅವರ ಅಧ್ಯಕ್ಷತೆಯಲ್ಲಿ ಹಾಗೂ ಬೆಮಸಾ ನಿಗಮದ ಅಧ್ಯಕ್ಷರಾದ ಶ್ರೀ ವಿ ಎಸ್ ಆರಾಧ್ಯ ಹಾಗೂ ವಾಕರಸಾ ನಿಗಮದ ಅಧ್ಯಕ್ಷರಾದ ಶ್ರೀ ಭರಮಗೌಡ (ರಾಜು ಕಾಗೆ) ಇವರ ಉಪಸ್ಥಿತಿಯಲ್ಲಿ ನಾಲ್ಕೂ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ನಡೆಯಿತು ಸಭೆಯಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ನೌಕರರ ವೇತನ ಪರಿಷ್ಕರಣೆ, ಬಾಕಿ ವೇತನ (ಅರಿಯರ್ಸ್) ಜಾರಿ, ಸಾರ್ವಜನಿಕ ಸಾರಿಗೆ ಸೇವೆ ಬಲಪಡಿಸಲು ಹೊಸ ಬಸ್ಗಳ ಅಗತ್ಯ ಹಾಗೂ ಇನ್ನಿತರ ವಿಷಯಗಳ ಕುರಿತು ತಮ್ಮ ಬೇಡಿಕೆಗಳನ್ನು ಪ್ರಸ್ತಾಪಿಸಿದರು ಈ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಮಾನ್ಯ ಸಾರಿಗೆ ಸಚಿವರು ಹಾಗೂ ನಿಗಮದ ಅಧ್ಯಕ್ಷರು, ಸದರಿ ಬೇಡಿಕೆಗಳ ವಿಷಯವನ್ನು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸರ್ಕಾರದ ಮಟ್ಟದಲ್ಲಿ ಸಮಾಲೋಚನೆ ನಡೆಸಲಾಗುವುದೆಂದು ತಿಳಿಸಿದರು. ಹಾಗೂ ಸರ್ಕಾರದ ಮಾರ್ಗಸೂಚಿಗಳನ್ವಯ ಕಾರ್ಮಿಕರ ಬೇಡಿಕೆಗಳಿಗೆ ಮತ್ತು ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲಾಗುವುದು ಎಂದರು. ಮುಂದುವರೆದು, ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಮುಂದಿನ ದಿನಗಳಲ್ಲಿ ಶೀಘ್ರವಾಗಿ ಮತ್ತೊಮ್ಮೆ ಸಭೆ ಕರೆಯಲು ತೀರ್ಮಾನಿಸಲಾಯಿತು ಇದೇ ಸಂದರ್ಭದಲ್ಲಿ DULT ಅನುದಾನಕ್ಕೆ ಸಂಬಂಧಿಸಿದ ವಿಷಯ ಹಾಗೂ KKRTC ಸಿಲ್ವರ್ ಜುಬಿಲಿ (ರಜತ ಮಹೋತ್ಸವ) ಆಚರಣೆಯ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು. ನಿಗಮದ ಅಭಿವೃದ್ಧಿ, ಕಾರ್ಮಿಕರ ಕಲ್ಯಾಣ ಹಾಗೂ ಸಾರ್ವಜನಿಕ ಸಾರಿಗೆ ಸೇವೆಯನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಮಿಕ ಸಂಘಟನೆಗಳೊಂದಿಗೆ ಸೌಹಾರ್ದಯುತ ಮತ್ತು ಸಕಾರಾತ್ಮಕ ಸಂವಾದ ನಡೆಯಿತು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!