ಬೆಂಗಳೂರು ನಗರದಲ್ಲಿ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ನಗರದ ಬಂಡೆ ಮಹಾಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಲಾಗಿದ್ದು ಬೆಳಗ್ಗೆಯಿಂದಲೇ ದೇವಿಯ ದರ್ಶನ ಪಡೆಯಲು ಭಕ್ತಾಧಿಗಳು ಸಾಲು ಸಾಲಾಗಿ ನಿಂತಿದ್ದಾರೆ.
ಬಂಡೆ ಮಹಾಕಾಳಿ ದೇವಿಯ ವಿಶೇಷ ಪೂಜೆಯಲ್ಲಿ ಹಲವಾರು ಭಕ್ತರು ಭಾಗಿಯಾಗಿದ್ದು, ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಹಬ್ಬದ ವಾತವರಣ ಕಳೆಗಟ್ಟಿದೆ. ದೇವಾಲಯದಲ್ಲಿ ದೇವರಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ ಸಲ್ಲಿಸಲಾಗ್ತಿದ್ದು, ದೇವರ ದರ್ಶನಕ್ಕೆ ನೂರಾರು ಭಕ್ತರು ಆಗಮಿಸಿದ್ದಾರೆ