Google search engine
ಮನೆUncategorizedಕಲಬುರಗಿ ತಾಲೂಕಿನ ಇಟಗಾ ಕೆ ಗ್ರಾಮದ ಸರ್ಕಾರಿ ಶಾಲೆ ಉಳಿಸಲು ಪೋಷಕರ ಪ್ರತಿಭಟನೆ

ಕಲಬುರಗಿ ತಾಲೂಕಿನ ಇಟಗಾ ಕೆ ಗ್ರಾಮದ ಸರ್ಕಾರಿ ಶಾಲೆ ಉಳಿಸಲು ಪೋಷಕರ ಪ್ರತಿಭಟನೆ

ಕಲಬುರಗಿ ತಾಲೂಕಿನ ಇಟಗಾ ಕೆ ಗ್ರಾಮದ ಸರ್ಕಾರಿ ಶಾಲೆ ಉಳಿಸಲು ಪೋಷಕರ ಪ್ರತಿಭಟನೆ ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ (KPS) – ಮ್ಯಾಗ್ನೆಟ್ ಶಾಲೆಗಳ ಯೋಜನೆ ಎಂಬ ವಂಚನೆಯ ಮುಖವಾಡದ ಅಡಿಯಲ್ಲಿ, ಸರ್ಕಾರವು ರಾಜ್ಯದಾದ್ಯಂತ 40,000ಕ್ಕೂ ಹೆಚ್ಚು ಶಾಲೆಗಳನ್ನು ವಿಲೀನಗೊಳಿಸುತ್ತಿದೆ. ಇದರ ಅಡಿಯಲ್ಲಿ ಕಲಬುರಗಿ ದಕ್ಷಿಣ ಭಾಗದ ಕಣದಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಟಗಾಕೆ ಶಾಲೆಯನ್ನು KPS ಗೆ ವಿಲೀನಗೊಳಿಸಿ ಸಂಪೂರ್ಣವಾಗಿ ಮುಚ್ಚುತ್ತಿರುವದನ್ನು ಖಂಡಿಸಿ ಇಂದು ಇಟಗಾ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತ್ತು ಈ ಸಂದರ್ಭದಲ್ಲಿ ಎಐಡಿಎಸ್ಓ ರಾಜ್ಯ ಉಪಾಧ್ಯಕ್ಷರಾದ ಹಣಮಂತ ಎಸ್ ಹೆಚ್ ಅವರು ಮಾತನಾಡುತ್ತಾ, ರಾಜ್ಯ ಸರ್ಕಾರವು KPS ಮ್ಯಾಗ್ನೆಟ್ ಶಾಲೆ ಎಂಬ ಹೆಸರಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸಿದ್ಧತೆ ನಡೆಸುತ್ತಿದೆ. “ಗುಣಮಟ್ಟ” ಮತ್ತು “ಮಾದರಿ ಶಾಲೆಗಳು” ಎಂಬ ಆಕರ್ಷಕ ಪದಗಳ ಹಿಂದೆ, ಉಚಿತ ಮತ್ತು ಸಾರ್ವತ್ರಿಕ ಶಿಕ್ಷಣದ ನಮ್ಮ ನವೋದಯ ಚಿಂತಕರು, ಕ್ರಾಂತಿಕಾರಿಗಳು ಗಳಿಸಿದ ಆಶಯವನ್ನು ನಾಶಪಡಿಸುವ ಒಂದು ನಿಷ್ಕರುಣ ಪ್ರಯತ್ನ ಅಡಗಿದೆ. ಮುಂದುವರೆದು, ಸರ್ಕಾರವು ಪ್ರತಿ ಹಳ್ಳಿಗೆ ಬಸ್ ಬಿಡುತ್ತೇವೆ ಎಂದು ರೈಲು ಬಿಡುತ್ತಿದ್ದಾರೆ. ಆದರೆ ಈಗಾಗಲೇ ಎಷ್ಟೋ ಹಳ್ಳಿಗಳಲ್ಲಿ ಬಸ್ ಇಲ್ಲದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಸ್ತವತೆ ಹೀಗಿರುವಾಗ, 6-7 ಕೀ.ಮಿ ದೂರದ ಶಾಲೆಯನ್ನು ತಲುಪಲಾಗದೆ ಬಡ ಮಕ್ಕಳು ಶಿಕ್ಷಣದಿಂದ ದೂರ ಉಳಿಯುತ್ತಾರಷ್ಟೇ! ಈ ಯೋಜನೆಗೆ ಏಷಿಯನ್ ಡೆವಲಪೈಂಟ್ ಬ್ಯಾಂಕಿನಿಂದ ಈಗಾಗಲೇ 2,000 ಕೋಟಿ ಸಾಲ ಪಡೆದಿರುವ ಮತ್ತು 10,000 ಕೋಟಿ ಸಾಲ ಪಡೆಯಲಿರುವ ಸರ್ಕಾರವು ಕಾರ್ಪೊರೇಟ್ ಹಿತಾಸಕ್ತಿ ಕಾಪಾಡಲು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳು ಮುಚ್ಚೋದಿಲ್ಲ ಎಂಬ ಶಿಕ್ಷಣ ಮಂತ್ರಿಗಳ ಮಾತುಗಳು ಕೇವಲ ಜನಗಳನ್ನು ದಾರಿ ತಪ್ಪಿಸುವತ್ತ ಸಾಗುತ್ತೇವೆ, ಇನ್ನೊಂದು ಕಡೆ ಶಿಕ್ಷಣ ಇಲಾಖೆ ಜಾರಿ ಮಾಡುತ್ತಿರುವಂತಹ ವರದಿಗಳು ಸಂಪೂರ್ಣವಾಗಿ ಶಾಲೆಗಳನ್ನ ಅತಿ ವೇಗದಲ್ಲಿ ಮುಚ್ಚಲು ಮುನ್ನುಗುತ್ತಿದೆ ಇದು ದುಡಿಯುವ ಜನಗಳಿಗೆ ಸರ್ಕಾರಗಳು ಬಗೆಯುತ್ತಿರುವಂತಹ ದ್ರೋಹ. ರಾಜ್ಯ ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಒಂದೇ ಒಂದು ಸರ್ಕಾರಿ ಶಾಲೆಯೂ ಕೂಡ ಮುಚ್ಚದಂತೆ ಲಿಖಿತ ರೂಪದಲ್ಲಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು ಎಐಡಿಎಸ್ಓ ಜಿಲ್ಲಾ ಕೌನ್ಸಿಲ್ ಕಾರ್ಯದರ್ಶಿ ವೆಂಕಟೇಶ ದೇವದುರ್ಗ ಮಾತನಾಡುತ್ತಾ, ಬಡವರ ಮಕ್ಕಳು ಓದುವ ಗ್ರಾಮೀಣ ಭಾಗದ ಹಾಗೂ ತಾಂಡಾಗಳ ಶಾಲೆಗಳನ್ನು ಸೌಲಭ್ಯ ಒದಗಿಸಿ ಅಭಿವೃದ್ಧಿ ಪಡಿಸಬೇಕಾದ ಸರ್ಕಾರವೇ ಇಂದು ಶಾಲೆಗಳನ್ನು ಮುಚ್ಚುತ್ತಿದೆ. ಬದಲಿಗೆ ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಭಕ್ಕಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿ ಹಣವಂತರಿಗೆ ಮಾತ್ರ ಶಿಕ್ಷಣ ಎಂಬ ಷಡ್ಯಂತ್ರವನ್ನು ಸರ್ಕಾರ ರಚಿಸಿದೆ. ಸರ್ಕಾರ ಜನರ ಹೋರಾಟವನ್ನು ಎದುರಿಸಲು ಸಿದ್ಧವಾಗಲಿ ಎಂದು ಎಚ್ಚರಿಕೆ ನೀಡಿದರು. ಉಚಿತ ಸಾರಿಗೆ ವ್ಯವಸ್ಥೆ ಮಾಡುವುದಾಗಿ ತಿಳಿಸಿ ಪಾಲಕರು ಮತ್ತು ಎಸ್ ಡಿ ಎಮ್ ಸಿ(SDMC) ಯವರ ಮೇಲೆ ಸಾರಿಗೆ ವ್ಯವಸ್ಥೆಯ ಹೊರೆ ಹೊರೆಸಲಾಗುತ್ತಿದೆ. ಪ್ರತಿಯೊಂದು ಶಾಲೆಯು ತನ್ನ ಆದಾಯದ ಮೂಲವನ್ನು ತಾವೇ ಹುಡುಕಿಕೊಳ್ಳಬೇಕು ಎಂದು ಹೇಳಿರುವುದು ಉಚಿತ ಹಾಗೂ ಸಾರ್ವತ್ರಿಕ ಶಿಕ್ಷಣದ ಆಶಯಗಳಿಗೆ ವಿರುದ್ಧವಾಗಿದೆ. ರಾಜ್ಯದ ಬಡ ರೈತ-ಕಾರ್ಮಿಕರ ಮಕ್ಕಳಿಂದ ಶಿಕ್ಷಣವನ್ನು ಸಂಪೂರ್ಣವಾಗಿ ಕಸೆದುಕೊಳ್ಳುವ ಈ ನೀತಿ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು ಈ ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಕೌನ್ಸಿಲ್ ಉಪಾಧ್ಯಕ್ಷೆ ಪ್ರೀತಿ ದೋಡ್ಡಮನಿ, ಸದಸ್ಯರಾದ ಬಾಬು ಪವರ್, ಯುವರಾಜ ರಾಠೋಡ್, ಸಂಪತ್ ಕುಮಾರ್ ಹಾಗೂ ನೂರಾರು ಜನ ಗ್ರಾಮಸ್ಥರು ಉಪಸ್ಥಿತರಿದ್ದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!