ಅನಧಿಕೃತ ಫ್ಲೆಕ್ಸ್ ಬೋರ್ಡ್–ಕಟೌಟ್ಗಳಿಗೆ ಬ್ರೇಕ್: ಮಹಾನಗರ ಪಾಲಿಕೆಯಿಂದ ತೆರವು ಕಾರ್ಯಾಚರಣೆ ಬೀದರ ನಗರದ ವಿವಿಧೆಡೆ ಅನುಮತಿ ಇಲ್ಲದೆ ಅಳವಡಿಸಲಾಗಿದ್ದ ಫ್ಲೆಕ್ಸ್ ಬೋರ್ಡ್ ಹಾಗೂ ಕಟೌಟ್ಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಇಂದು ತೆರವುಗೊಳಿಸಿದರು. ರಸ್ತೆ ಬದಿಗಳಲ್ಲಿ, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿದ್ದ ಅನಧಿಕೃತ ಫ್ಲೆಕ್ಸ್ಗಳು ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಅಪಘಾತಗಳಿಗೆ ಕಾರಣವಾಗುವ ಸಾಧ್ಯತೆ ಇರುವ ಹಿನ್ನೆಲೆ ಪಾಲಿಕೆ ಈ ಕ್ರಮ ಕೈಗೊಂಡಿದೆ. ಪಾಲಿಕೆ ಆಯುಕ್ತರ ಸೂಚನೆಯಂತೆ ಸಿಬ್ಬಂದಿ ಹಾಗೂ ಜೆಸಿಬಿ ಯಂತ್ರಗಳ ಸಹಾಯದಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು. ನಿಯಮ ಉಲ್ಲಂಘಿಸಿ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ದಂಡ ವಿಧಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ನಗರದ ಸೌಂದರ್ಯ ಮತ್ತು ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಅನುಮತಿ ಇಲ್ಲದ ಫ್ಲೆಕ್ಸ್ಗಳನ್ನು ಮುಂದೆಯೂ ಕಟ್ಟುನಿಟ್ಟಾಗಿ ತೆರವುಗೊಳಿಸಲಾಗುವುದು ಎಂದು ಮಹಾನಗರ ಪಾಲಿಕೆ ಸ್ಪಷ್ಟಪಡಿಸಿದೆ





