ಫಿಲಿಪೈನ್ಸ್ನಲ್ಲಿ ಭೂಕುಸಿತ: 27 ಜನ ನಾಪತ್ತೆ, ಒರ್ವ ಸಾವು.. ಫಿಲಿಪೈನ್ಸ್ನ ಸೆಬು ನಗರದಲ್ಲಿ ಬಿನಾಲಿವ್ ಗ್ರಾಮದ ತ್ಯಾಜ್ಯ ವಿಂಗಡಣಾ ಕೇಂದ್ರದಲ್ಲಿ ಭೂಕುಸಿತ ಸಂಭವಿಸಿ, ಬೃಹತ್ ಕಸದ ರಾಶಿ ಕುಸಿದಿದೆ. ಈ ದುರ್ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, 27 ಮಂದಿ ನಾಪತ್ತೆಯಾಗಿದ್ದಾರೆ. ಕಸದ ರಾಶಿಯೊಳಗೆ ಸಿಲುಕಿದ್ದ 8 ಜನರನ್ನು ಜೀವಂತವಾಗಿ ರಕ್ಷಿಸಲಾಗಿದೆ, ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಪತ್ತೆಯಾದವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಪೊಲೀಸ್ ನಿರ್ದೇಶಕ ಬ್ರಿಗೇಡಿಯರ್ ಜನರಲ್ ರೊಡೆರಿಕ್ ಮಾರನನ್ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಮಿಕರು ಮಾತ್ರ ಇದ್ದರೇ ಅಥವಾ ಸ್ಥಳೀಯರೂ ಪರಿಣಾಮಕ್ಕೆ ಒಳಗಾಗಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ





