ಬೀದರ ನಗರದ ಸುದ್ದಿ ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ ಬೀದರ:ಬೀದರ್ ತಾಲೂಕಿನ ಮರಕಲ್ ಗ್ರಾಮ ಪಂಚಾಯತಿ 2024–25ನೇ ಸಾಲಿನ ಗಾಂಧಿ ಗ್ರಾಮ ಪ್ರಶಸ್ತಿಗೆ 152 ಅಂಕಗಳೊಂದಿಗೆ ಪ್ರಥಮ ಸ್ಥಾನದಲ್ಲಿದ್ದರೂ, ಕಡಿಮೆ ಅಂಕ ಪಡೆದ ಗ್ರಾಮ ಪಂಚಾಯತಿಯನ್ನು ಆಯ್ಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ತಾರತಮ್ಯ ನೀತಿಯನ್ನು ಖಂಡಿಸಿ ಜನವರಿ 19ರಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಎದುರು ಮರಕಲ್ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಗ್ರಾಮಸ್ಥರು ನಾಳೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಮಾಧ್ಯಮದ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಮರಕಲ್ ಗ್ರಾಮ ಪಂಚಾಯತಿ ಸದಸ್ಯರಾದ ಖಲೀಲ ಮಿಯ್ಯಾ ಗುತ್ತೆದಾರ





