Home Uncategorized ಕಲಬುರಗಿ ಜಿಲ್ಲಾ ಪೊಲೀಸ್ ವ್ಯವಸ್ಥೆಯು ಅಪರಾಧ ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸುವಲ್ಲಿಮುಂಚೂಣಿಯಲ್ಲಿದೆ

ಕಲಬುರಗಿ ಜಿಲ್ಲಾ ಪೊಲೀಸ್ ವ್ಯವಸ್ಥೆಯು ಅಪರಾಧ ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸುವಲ್ಲಿಮುಂಚೂಣಿಯಲ್ಲಿದೆ

0
ಕಲಬುರಗಿ ಜಿಲ್ಲಾ ಪೊಲೀಸ್ ವ್ಯವಸ್ಥೆಯು ಅಪರಾಧ ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸುವಲ್ಲಿಮುಂಚೂಣಿಯಲ್ಲಿದೆ

ಜನಸ್ನೇಹಿ ವ್ಯವಸ್ಥೆ, ವೃತ್ತಿಪರತೆ, ತ್ವರಿತ ನಾಗರಿಕ ಸೇವೆ, ಗುಣಮಟ್ಟದ ಆಡಳಿತ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆ ಹೊಂದಿರುವ ಕಲಬುರಗಿ ಜಿಲ್ಲಾ ಪೊಲೀಸ್ ವ್ಯವಸ್ಥೆಯು ಅಪರಾಧ ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸುವಲ್ಲಿ, ಪ್ರಕರಣಗಳನ್ನು ಭೇದಿಸುವಲ್ಲಿ ಮುಂಚೂಣಿಯಲ್ಲಿದೆ. ಸಾರ್ವಜನಿಕ ಸೇವೆಗಳಲ್ಲಿ ಮತ್ತು ಇತರೆ ವಿಭಾಗಗಳಲ್ಲಿ ತಂದ ಸುಧಾರಣೆಯನ್ನು ಪರಿಗಣಿಸಿ ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಯು ಇತ್ತೀಚೆಗೆ ‘ISO 9001: 2015’ ಪ್ರಶಸ್ತಿಗೆ ಪುರಸ್ಕೃತವಾಗಿತ್ತು. ಈ ಪ್ರಶಸ್ತಿ ಪಡೆದ ರಾಜ್ಯದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ಅದು ಪಾತ್ರವಾಗಿದೆ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸಿಬ್ಬಂದಿಗೆ ಉತ್ತಮ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಲು ಕಲಬುರಗಿ ನಗರದಲ್ಲಿ ಹೊಸ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ ಸಂಚಾರಿ ಪೊಲೀಸ್ ಠಾಣೆಗೆ ನೂತನ ಕಟ್ಟಣವನ್ನು ನಿರ್ಮಾಣ ಮಾಡಲಾಗುತ್ತಿದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಐಟಿ ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪ್ರಿಯಾಂಕ್ ಅವರು ವಿಶೇಷ ಆಸ್ಥೆ ವಹಿಸಿ ಕಲಬುರಗಿ ಪೊಲೀಸರಿಗೆ ಸುಸಜ್ಜಿತ ಸೂರು ಕಲ್ಪಿಸುವ ಕಾಮಗಾರಿಗಳನ್ನು ತಂದಿದ್ದಾರೆ ಕಲಬುರಗಿ ನಗರ ಪೊಲೀಸ್ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಹಾಗೂ ಮೂಲಭೂತ ಅಭಿವೃದ್ಧಿ ನಿಗಮದ ಸಂಯುಕ್ತ ಆಶ್ರಯದಲ್ಲಿ ಪೊಲೀಸ್ ಗೃಹ 2025 ಹಂತ-5ರ ಯೋಜನೆಯಡಿ ಪೊಲೀಸ್ ಸಿಬ್ಬಂದಿ ವಸತಿ ಗೃಹಗಳು ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಹಾಗೆಯೇ ಎಂಬಿ ನಗರದಲ್ಲಿದ್ದ ಸಂಚಾರಿ ಪೊಲೀಸ್ ಠಾಣೆಯನ್ನು ಸೂಪರ್ ಮಾರ್ಕೆಟ್ನಲ್ಲಿ ನಿರ್ಮಿಸಲಾಗುತ್ತಿದೆ 1. 24 ಪಿಸಿ ವಸತಿ ಗೃಹಗಳು ಕಲಬುರಗಿಯ ಬ್ರಹ್ಮಪುರದಲ್ಲಿ 7.18 ಕೋಟಿ ರೂ ವೆಚ್ಚದಲ್ಲಿ 24 ಪಿಸಿ ವಸತಿಗೃಹಗಳ ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಲಾಗಿದೆ. 11 ತಿಂಗಳ ಅವಧಿಯಲ್ಲಿ ಈ ಕಾಮಗಾರಿ ಪೂರ್ಣಗೊಳ್ಳುವಂತೆ ಗಡುವು ನೀಡಲಾಗಿದೆ

LEAVE A REPLY

Please enter your comment!
Please enter your name here

error: Content is protected !!