ಮತಗಟ್ಟೆಯನ್ನು ನಮ್ಮ ಗ್ರಾಮದಲ್ಲಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಕೋಲಾರ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಲಾಗಿದೆ.
ಕೃಷ್ಣಾಪುರ ಗ್ರಾಮದ ಮತಗಟ್ಟೆಯನ್ನು ಪಕ್ಕದ ಗ್ರಾಮವಾದ ಅಮ್ಮನಲ್ಲೂರಿಗೆ ವರ್ಗಾಯಿಸಲಾಗಿದೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಗ್ರಾಮದಲ್ಲಿ ೨೦೦ ಮನೆಗಳಿದ್ದು, 360ಕ್ಕೂ ಹೆಚ್ಚು ಮತದಾರರಿದ್ದಾರೆ.