Google search engine
ಮನೆಬಿಸಿ ಬಿಸಿ ಸುದ್ದಿಕಲಬುರಗಿಯಲ್ಲಿ ಲೋಕಸಭಾ ಚುನಾವಣೆ ೨೦೨೪ರ ಪ್ರಕ್ರಿಯೆ ಇದಾಗಲೆ ಅರಂಭವಾಗಿದ್ದುಜಿಲ್ಲಾಧಿಕಾರಿಗಳ ಕಚೇರಿಯ ಸುತ್ತಮುತ್ತ ಕಾಯ್ದೆ ೧೯೭೩ರ ಕಲಂ...

ಕಲಬುರಗಿಯಲ್ಲಿ ಲೋಕಸಭಾ ಚುನಾವಣೆ ೨೦೨೪ರ ಪ್ರಕ್ರಿಯೆ ಇದಾಗಲೆ ಅರಂಭವಾಗಿದ್ದುಜಿಲ್ಲಾಧಿಕಾರಿಗಳ ಕಚೇರಿಯ ಸುತ್ತಮುತ್ತ ಕಾಯ್ದೆ ೧೯೭೩ರ ಕಲಂ ೧೪೪ಜಾರಿಯಲ್ಲಿದೆ.

ಕಲಬುರಗಿಯಲ್ಲಿ ಲೋಕಸಭಾ ಚುನಾವಣೆ ೨೦೨೪ರ ಪ್ರಕ್ರಿಯೆ ಇದಾಗಲೆ ಅರಂಭವಾಗಿದ್ದು ನಾಮಪತ್ರ ಸಲ್ಲಿಸುವಿಕೆ ಪ್ರಕ್ರಿಯೆ ಜರುಗುತ್ತಲಿದ್ದು ೨೦.೦೪.೨೦೨೪ರಂದು ನಾಮಪತ್ರ ಪರಿಶೀಲನೆ ಹಾಗು ೨೨.೦೪.೨೦೨೪ ರಂದು ನಾಮಪತ್ರ ಹಿಂಪಡೆಯುವಿಕೆ ಪ್ರಕ್ರಿಯೆ ನಡೆಯಲಿದೆ.ಅದಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಸುತ್ತಮುತ್ತ ಕಾಯ್ದೆ ೧೯೭೩ರ ಕಲಂ ೧೪೪ಜಾರಿಯಲ್ಲಿದೆ.

ನಾಮಪತ್ರ ಸಲ್ಲಿಕೆ ಹಿನ್ನೆಲೆ, ಡಿ.ಸಿ. ಕಚೇರಿ ಸುತ್ತ ಅನಗತ್ಯ ಓಡಾಟ ನಿಷೇಧ

ಕಲಬುರಗಿ,ಏ.11(ಕ.ವಾ) ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ನಡೆಯುವ ಚುನಾವಣೆಗೆ ಏಪ್ರಿಲ್ 12 ರಂದು ಚುನಾವಣಾ ಅಧಿಸೂಚನೆ ಹೊರಡಿಸಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳ ಕಚೇರಿ ಸುತ್ತಮುತ್ತ ಸಿ.ಆರ್‌.ಪಿ.ಸಿ ಕಾಯ್ದೆ-1973ರ ಕಲಂ 144ರನ್ವಯ ಸಾರ್ವಜನಿಕರ ಅನಗತ್ಯ ಓಡಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಏಪ್ರಿಲ್ 12 ರಿಂದ 19ರ ವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಅಭ್ಯರ್ಥಿಗಳು ನಾಮಪತ್ರ‌ ಸಲ್ಲಿಸಬಹುದಾಗಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಪರಿಶೀಲನಾ ಕಾರ್ಯ‌ ನಡೆಯಲಿದ್ದು, ಏಪ್ರಿಲ್ 22ಕ್ಕೆ ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನವಾಗಿದೆ. ಈ ಅವಧಿಯಲ್ಲಿ ಸಾರ್ವಜನಿಕರು ವಿನಾಕಾರಣ ಡಿ.ಸಿ. ಕಚೇರಿ ಸುತ್ತ ಓಡಾಟ ಮಾಡಬಾರದು ಮತ್ತು ಯಾವುದೇ ರೀತಿಯ ಘೋಷಣೆಗಳನ್ನು ಕೂಗುವುದನ್ನು ಸಹ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿರುವ ಸರಕಾರಿ ಕಚೇರಿಯಲ್ಲಿ ಅಗತ್ಯ ಕೆಲಸವಿದ್ದರೆ ಮಾತ್ರ ಬೆಳಿಗ್ಗೆ 11 ಗಂಟೆಗಿಂತ ಮುಂಚೆ ಮತ್ತು ಮಧ್ಯಾಹ್ನ 3 ಗಂಟೆಯ ನಂತರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಯಾವುದೇ ವ್ಯಕ್ತಿಯು ಅನುಮಾನಾಸ್ಪದವಾಗಿ ಓಡಾಡುವುದು ಕಂಡುಬಂದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಿರುವ ಡಿ.ಸಿ ಅವರು, ಸಾರ್ವಜನಿಕರು ಈ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!