ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಸ್ವಗ್ರಾಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರೋಡ್ ಶೋ ನಡೆಸಿದರು.
ಹದಿನಾರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಬಾಲರಾಜು ಪರ ಭರ್ಜರಿ ಮತ ಪ್ರಚಾರ ಮಾಡಿದರು. ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಅದ್ದೂರಿಯಾಗಿ ಕಾರ್ಯಕರ್ತರು ಸ್ವಾಗತ ಕೋರಿದರು. ವೀರಭದ್ರೇಶ್ವರ ಸ್ವಾಮಿ ಗೆ ಕೈಮುಗಿದು ರೋಡ್ ಶೋಗೆ ಚಾಲನೆ ನೀಡಿದರು.