*ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆ:*
ಕಲಬುರಗಿ,ಮೇ 14 :- ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ 2024ರ ಜೂನ್ 3ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಮಂಗಳವಾರ ಎನ್. ಪ್ರತಾಪರೆಡ್ಡಿ ನಾಮಪತ್ರ ಸಲ್ಲಿಸಿದರು
ನಾಮಪತ್ರ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ. ಮೇ 17 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ನಾಮಪತ್ರಗಳನ್ನು ಹಿಂದಕ್ಕೆ ಪಡೆಯುವ ಕೊನೆಯ ದಿನ ಮೇ 20 ಇರುತ್ತದೆ. ಇಲ್ಲಿಯವರೆಗೆ 9 ಅಭ್ಯರ್ಥಿಗಳಿಂದ 12 ನಾಮಪತ್ರಗಳು ಸಲ್ಲಿಸಿದಂತಾಗಿದೆ.