ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜೇಂದ್ರ ಆರೋಪಿಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರವು ಆಡಳಿತವನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ. ಈ ಅವಧಿಯಲ್ಲಿ ರಾಜ್ಯದಲ್ಲಿ ಕೊಲೆ, ಸುಲಿಗೆ, ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ದೂಷಿಸಿದರು





