Home Uncategorized ಹುಬ್ಬಳ್ಳಿಯ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಹುಬ್ಬಳ್ಳಿಯ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹ

0
ಹುಬ್ಬಳ್ಳಿಯ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಚಿತ್ತಾಪುರ ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಗ್ರೇಡ್ 2 ತಹಶಿಲ್ದಾರ್ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೋಲಿ ಸಮಾಜದ ಮುಖಂಡರಾದ ಮಲ್ಲಿಕಾರ್ಜುನ ಎಮ್ಮೆನೂರ್, ಬಸವರಾಜ ಚಿನ್ನಮಳ್ಳಿ, ಸುರೇಶ ಬೆನಕನಳ್ಳಿ, ಹಣಮಂತ ಸಂಕನೂರ, ತಮ್ಮಣ್ಣ ಡಿಗ್ಗಿ, ಗುಂಡು ಐನಾಪುರ, ದಶರಥ ದೊಡ್ಮನಿ, ರಾಜು ಹೋಳಿಕಟ್ಟಿ, ಭೀಮು ಹೋತಿನಮಡಿ, ಕರಣಕುಮಾರ್ ಅಲ್ಲೂರಕರ್ ಸೇರಿದಂತೆ ಕೋಲಿ ಸಮಾಜದ ಅನೇಕ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here

error: Content is protected !!